‘ಕೆಜಿಎಫ್’ ತಾತ ಎಂದೇ ಫೇಮಸ್ ಆಗಿದ್ದ ಕೃಷ್ಣ ಜಿ ರಾವ್ ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಕೃಷ್ಣ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಕೃಷ್ಣ ರಾವ್ ಅವರ ಸಾವಿನ ಸುದ್ದಿ ತಿಳಿದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಕೃಷ್ಣ ರಾಮ್ ಅವರು ನಟ ಶಂಕರ್ ನಾಗ್ ಕಾಲದಿಂದಲೂ ಚಿತ್ರರಂಗದಲ್ಲಿದ್ದು, ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಯಶ್ ನಟನೆಯ ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾ ಮೂಲಕ ಖ್ಯಾತಿ ಗಳಿಸಿ, ಕೆಜಿಎಫ್ ತಾತಾ ಎಂದೇ ಫೇಮಸ್ ಆಗಿದ್ದರು.










