ಕೆಜಿಎಫ್ 2 ಹಾಡು ದುರ್ಬಳಕೆ ಆರೋಪ – ರಾಹುಲ್ ಗಾಂಧಿಗೆ ಬಿಗ್ ರಿಲೀಫ್…

55
firstsuddi

ಬೆಂಗಳೂರು : ಭಾರತ್ ಜೋಡೋ ಯಾತ್ರೆ ವೇಳೆ ಕೆಜಿಎಫ್ 2 ಹಾಡು ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಭಾರತ್ ಜೋಡೋ ಯಾತ್ರೆ ವೇಳೆ ಕೆಜಿಎಫ್ ಹಾಡು ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಸಂವಹನ ಮತ್ತು ಪ್ರಚಾರ ವಿಭಾಗದ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನೆಟೆ ಮತ್ತು ಸಂಸದ ರಾಹುಲ್ ಗಾಂಧಿ ವಿರುದ್ದ ಕೇಸ್ ದಾಖಲಾಗಿತ್ತು. ಪ್ರಕರಣ ರದ್ದು ಕೋರಿ ಮೂವರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನೀಲ್ ದತ್ ಯಾದವ್, ಈ ಪ್ರಕರಣ ಸಂಬಂಧ ತನಿಖೆಗೆ ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆ ನೀಡಿ ಆದೇಶ ನೀಡಿದ್ದಾರೆ.