ಕೆನಡಾದಲ್ಲಿ ಚೂರಿ ಇರಿತ – 10 ಮಂದಿ ಸಾವು, 15 ಜನರಿಗೆ ಗಾಯ…

51
firstsuddi

ಒಟ್ಟಾವಾ : ಕೆನಡಾದ ಸಾಸ್ಕಾಚೆವಾನ್ ಪ್ರಾಂತ್ಯದಲ್ಲಿ ನಡೆದಿರುವ ಸಾಮೂಹಿಕ ಚೂರಿ ಇರಿತ ಪ್ರಕರಣದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಾಯಗೊಂಡಿದ್ದಾರೆ.

ಯಾವ ಕಾರಣಕ್ಕಾಗಿ ಈ ದಾಳಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರ ಪತ್ತೆಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ಘಟನೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸಂತಾಪ ಸೂಚಿಸಿದ್ದು, ಕೆನಡಾದ ಸಸ್ಕತ್ ಚೆವನ್ ಪ್ರಾಂತ್ಯದಲ್ಲಿ ನಡೆದ ದಾಳಿ ಭಯಾನಕ ಹಾಗೂ ಹೃದಯವಿದ್ರಾವಕವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರು ಮತ್ತು ಗಾಯಗೊಂಡವರ ಬಗ್ಗೆ ನನಗೆ ನೋವಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.