ಕೆಪಿಎಲ್ ಮ್ಯಾಚ್ ಫಿಕ್ಸಿಂಗ್- ಕರ್ನಾಟಕದ ಇಬ್ಬರು ಆಟಗಾರರು ಸಿಸಿಬಿ ಬಲೆಗೆ…

328
firstsuddi

ಬೆಂಗಳೂರು : ಕನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದ ಕರ್ನಾಟಕ ತಂಡದ ಇಬ್ಬರು ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ತಂಡದ ನಾಯಕ ಸಿ.ಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಹುಬ್ಬಳ್ಳಿ ಹಾಗೂ ಬಳ್ಳಾರಿ ತಂಡದ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸಿ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರನ್ನು ಬಂಧಿಸಿದ್ದಾರೆ. ಆಟಗಾರರು ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಲು 20ಲಕ್ಷ ರೂ ಹಣವನ್ನು ಪಡೆದಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.