ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ-ಬೆಳಗಾವಿ ತಂಡದ ಕೋಚ್ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ದಾಳಿ…

217
firstsuddi

ಬೆಂಗಳೂರು : ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಂಡದ ಕೋಚ್ ಹಾಗೂ ಕರ್ನಾಟಕದ ಅಂಡರ್19 ತಂಡದ ಕೋಚ್ ಆಗಿರುವ ಸುಧೀಂದ್ರ ಶಿಂಧೆ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸುಧೀಂದ್ರ ಶಿಂಧೆ ಅವರ ಮನೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಹೊಂದಿರುವುದರಿಂದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಇವರು ಕೆಪಿಎಲ್ ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿ ಕೆಲವು ಬುಕ್ಕಿಗಳ ಜೊತೆ ಸೇರಿಕೊಂಡಿದ್ದರು ಎಂಬ ಮಾಹಿತಿ ಹೊರಬಂದಿದೆ.