ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು…

222
firstsuddi

ದಾವಣಗೆರೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತಮಲೇಹಳ್ಳಿಯ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್(21) ಮೃತ ಯುವಕ ಎಂದು ಗುರುತಿಸಲಾಗಿದ್ದು, ಮೃತ ಯುವಕ ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ತೆರಳಿದ್ದು, ಕೆರೆಯ ಮಧ್ಯ ಭಾಗಕ್ಕೆ ತೆರಳಿ ವಾಪಸ್ಸು ಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ, ಈ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.