ನವದೆಹಲಿ : ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ(66) ಅವರು ನಿಧನರಾಗಿದ್ದು, ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಆ.9ರಂದು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.










