ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ…

175
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 2ನೇ ಕೇಂದ್ರ ಬಜೆಟ್‍ಗೆ ಕ್ಷಣಗಣನೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಆರ್ಥಿಕ ಕುಸಿತ, ಕನಿಷ್ಠ ಜಿಡಿಪಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ, ಆದಾಯ ಕೊರತೆ ಮೊದಲಾದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿರೀಕ್ಷೆ ಹೆಚ್ಚಾಗಿದ್ದು, ಇಂದು ಬೆಳಿಗ್ಗೆ 11ಗಂಟೆಗೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯ ಸ್ಪೀಕರ್ ಅವರ ಅನುಮತಿ ಪಡೆದು ಬಜೆಟ್ ಓದಲಿದ್ದಾರೆ. ಸಾಧಾರಣವಾಗಿ ಬಜೆಟ್ ಭಾಷಣ 90 ರಿಂದ 120 ನಿಮಿಷದ ಒಳಗಡೆ ಇರುತ್ತದೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಇದ್ದಾರೆ.