ಬೆಂಗಳೂರು : ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುವು ಮಾಡಿಕೊಡಬೇಕು ಎಂದು ಕನ್ನಡಿಗರು ಕೇಂದ್ರ ಸರ್ಕಾರಕ್ಕೆ ಹಲವಾರು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ ಕನ್ನಡಿಗರ ಬೇಡಿಕೆಗಳ ನಂತರವೂ ಐಬಿಪಿಎಸ್ ಪರೀಕ್ಷೆಯನ್ನು ಇಂಗ್ಲೀಷ್ನಲ್ಲೇ ನಡೆಸಲಾಗುತ್ತಿದ್ದು, ಈ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.











