ಡೆಹ್ರಾಡೂನ್ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಈ ವೇಳೆ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು.
ಕೇದಾರನಾಥ ಭೇಟಿ ಬಳಿಕ ಬದರಿನಾಥಕ್ಕೆ ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್ ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.










