ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ…

42
firstsuddi

ತಿರುವನಂತಪುರಂ : ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ. ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ.

ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಜನವರಿ 12ರಿಂದಲೇ ಜಾರಿಗೆ ಬರುವಂತೆ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ.