ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೋದಿ ಚಾಲನೆ…

57
firstsuddi

ತಿರುವನಂತಪುರಂ : ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ರಾಜಧಾನಿ ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಈ ರೈಲು ಸಂಚರಿಸುತ್ತದೆ.

ತಿರುವನಂತಪುರಂ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಬೆಳಗ್ಗೆ 11.10ಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಉಪಸ್ಥಿತರಿದ್ದರು.

ಕೇರಳದ ಮೊದಲ ವಂದೇ ಭಾರತ್ ರೈಲು ರಾಜಧಾನಿ ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು ಹೀಗೆ ಒಟ್ಟು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

ಕೇರಳದ ಮೊದಲ ವಂದೇ ಭಾರತ್ ರೈಲು ಏಪ್ರಿಲ್ 28ರಿಂದ ಕಾರ್ಯನಿರ್ವಹಿಸಲಿದೆ. ಈ ರೈಲಿನಲ್ಲಿ ಚೇರ್ ಕಾರ್ ಟಿಕೆಟ್ ದರ ತಿರುವನಂತಪುರಂನಿಂದ  ಕಾಸರಗೋಡಿಗೆ 1,590 ರೂ. ಮತ್ತು ಎಕ್ಸಿಕ್ಯೂಟಿವ್ ಚೇರ್ ಕಾರ್ ಸೀಟಿಂಗ್ ಟಿಕೆಟ್ ದರ 2,280 ರೂ.ಇದೆ. ತಿರುವನಂತಪುರಂ ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರತಿದಿನ ಬೆಳಗ್ಗೆ 5.20ಕ್ಕೆ ಹೊರಡಲಿದೆ. ಐದು ಗಂಟೆ ಐದು ನಿಮಿಷಗಳಲ್ಲಿ ಕಾಸರಗೋಡಿಗೆ ಸಂಚರಿಸುತ್ತದೆ.