ಕೇರಳದ ಶ್ರೀ ಕೃಷ್ಣ ದೇವಾಲಯದಲ್ಲಿ ತುಲಭಾರ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ…

255
firstsuddi

ಕೇರಳ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ನಂತರ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದು, ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಕೇರಳದ ಗುರುವಾಯುರು ಶ್ರೀ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದು,ಮೋದಿಯವರು 2008ರಲ್ಲಿ ಗುಜರಾತ್ ನಲ್ಲಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವೇಳೆ ಶ್ರೀ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು ಎನ್ನಲಾಗಿದ್ದು, ಗುರುವಾಯುರು ಶ್ರೀ ಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆಯನ್ನು ಸಲ್ಲಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.