ಕೈಕಾಲು ಕಟ್ಟಿ ಹಾಕಿ ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ…

465
firstsuddi

ಕೋಲಾರ : ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿ ವಿವಾಹಿತೆ ಮಹಿಳೆಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರದಲ್ಲಿ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗ್ರಾಮದ ಚಂದ್ರಪ್ಪ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ. ನಿನ್ನೆ ಸಂಜೆ ಮಹಿಳೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಾರು ಇಲ್ಲದ್ದನ್ನು ಗಮನಿಸಿದ ಆರೋಪಿ ಚಂದ್ರಪ್ಪ ಎಂಬುವವರು ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಚಂದ್ರಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.