ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ; ಇಬ್ಬರು ಅರೆಸ್ಟ್…

90
firstsuddi

ದಿಸ್ಪೂರ್ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂನ ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಕೈ ಹಾಗೂ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಎಂದು ಶಂಕಿಸಲಾಗಿದೆ. ಅಸ್ಸಾಂನ ದಿಬ್ರುಗಢದ ಅಥಾಬರಿ ಚಹಾ ತೋಟದ ಬಳಿ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಫೆ. 3ರಿಂದ ಆಕೆ ನಾಪತ್ತೆ ಆಗಿದ್ದಳು.

ಆರೋಪಿಗಳ ವಿರುದ್ಧ 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಿಬ್ರುಗಢ ಎಸ್ಪಿ ಶ್ವೇತಾಂಕ್ ಮಿಶ್ರಾ ತಿಳಿಸಿದ್ದಾರೆ.