ಬಣಕಲ್ :ಕಾಲುಜಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು.

115

ಕೊಟ್ಟಿಗೆಹಾರ:ಬಣಕಲ್ ಠಾಣಾ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಗುಡ್ಡಟ್ಟಿ ಗ್ರಾಮ ರಾಮ (35) ಮೃತ ಪಟ್ಟ ದುರ್ದೈವಿ. ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಮೃತರ ಸಂಬಂಧಿಕರು ದೂರು ನೀಡಿದ್ದು ಪಾತ್ರೆ ತೊಳೆಯಲು ಹಳ್ಳಕ್ಕೆ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೋಲಿಸರು ಬೇಟಿ ನೀಡಿದ್ದು ಪೋಲಿಸರು ಹಾಗೂ ಸಮಾಜ ಸೇವಕ ಆರೀಪ್ ಕಾರ್ಯಾಚರಣೆ ನಡೆಸಿ ಹಳ್ಳದಲ್ಲಿದ್ದ ಮೃತದೇಹವನ್ನು ಮೇಲೆತ್ತಿದ್ದರು.