ಕೊಟ್ಟಿಗೆಹಾರ: ಕೊಟ್ಟಿಗೆಹಾರ ಪ್ರೌಡಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವಬಾವಿ ಸಿದ್ದತೆ ಸಭೆ ನಡೆಯಿತು. ಸಭೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ಎಸ್‍ಡಿಎಂಸಿ ಅದ್ಯಕ್ಷ ಸಂಜಯಗೌಡ ಅವರು ಮಾತನಾಡಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಅತ್ಯಂತ ಮಹತ್ವದಾಗಿದ್ದು ಈ ಪರೀಕ್ಷೆ ನಡೆಯುವುದು ಅಗತ್ಯವಾಗಿದೆ. ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ವಿದ್ಯಾರ್ಥಿ ನಿರಾತಂಕವಾಗಿ ಪರೀಕ್ಷೆ ಬರೆಯಬಹುದಾಗಿದ್ದು ಯಾವುದೇ ಗೊಂದಲ ಬೇಡ ಎಂದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಕಮಲ, ಸಹ ಶಿಕ್ಷಕರಾದ ಸೌಮ್ಯ, ಯೋಗೇಶ್, ಕಿರಣ್, ಹಾಗೂ ಪೋಷಕರು, ವಿದ್ಯಾರ್ಥಿಗಳು ಇದ್ದರು.










