ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆ ಜಾರಿ…

71
firstsuddi

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

ಆ.26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಈ 4 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ. ವಿಜಯೋತ್ಸವ ಮಾಡುವಂತಿಲ್ಲ. ಆದರೆ, ಪೂರ್ವ ಯೋಚಿತ, ಮದುವೆ, ನಾಮಕರಣ, ಗೃಹಪ್ರವೇಶ, ಸರ್ಕಾರಿ ಕಾರ್ಯಕ್ರಮಗಳನ್ನು ನಿಗದಿಯಂತೆ ಮಾಡಲು ಅವಕಾಶ ಕೊಡಲಾಗಿದೆ.