ಕೊಡಗಿನ ಮದುವೆ ಸಮಾರಂಭಗಳಲ್ಲಿ ಮದ್ಯ ಬಳಕೆಗೆ ಚುನಾವಣಾ ಆಯೋಗ ಅನುಮತಿ…

54
firstsuddi

ಮಡಿಕೇರಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೊಡಗಿನ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಕೊಡವ ಸಮಾಜ, ಗೌಡ ಸಮಾಜ ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದೀಗ ಮದ್ಯ ನಿಷೇಧ ನಿರ್ಬಂಧ ಸಡಿಲಿಸಿ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ನೀಡುವಂತೆ ರಾಜ್ಯದ ಎಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ಕೊಟ್ಟಿದ್ದಾರೆ.

ಆದರೆ ರಾಜಕೀಯ ಪಕ್ಷಗಳಿಂದ ಅಥವಾ ರಾಜಕಾರಣಿಗಳಿಂದ ನಡೆಯುವ ಸಭೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಬಾರದು. ಉಳಿದಂತೆ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಎಂದಿನಂತೆ ಮದ್ಯ ಸರಬರಾಜಿಗೆ ಅನುಮತಿ ನೀಡಬಹುದು ಎಂದು ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಕೊಡಗಿನಲ್ಲಿ ಪ್ರತಿ ಮದುವೆ ಸಮಾರಂಭಗಳಿಗೆ ಮದ್ಯಪಾನ ಮಾಡುವುದು ಇಲ್ಲಿನ ಸಂಸ್ಕೃತಿಯಲ್ಲಿ ಒಂದು ಭಾಗವೇ ಆಗಿ ಹೋಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.