ಚಿಕ್ಕಮಗಳೂರು : ಕನ್ನಡದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮ ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ನೆರವೇರಿತು.
ವಿಜಯ್ ಅವರ ಬಾಲ್ಯದ ಸ್ನೇಹಿತ ರಘು ಅವರ ತೋಟದಲ್ಲೇ ಸಕಾಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಕಪ್ಪೂರು ಶ್ರೀಗಳ ನೇತೃತ್ವದಲ್ಲಿ ವಿಜಯ್ ಸಹೋದರನಿಂದ ಅಂತಿಮ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸಮಾಧಿ ಜಾಗಕ್ಕೆ ಬಿಲ್ವಪತ್ರೆ ವಿಭೂತಿ ಹಾಕಿ ಅಂತಿಮ ಪೂಜೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ನಟ ಸಂಚಾರಿ ವಿಜಯ್ ಗೆ ಪೊಲೀಸ್ ಗೌರವ ನೀಡಲಾಯಿತು. ಸಮಾಧಿ ಸ್ಥಳದಲ್ಲಿ ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಅಂತಿಮ ವಿದಾಯ ಹೇಳಿದರು.










