ಕೊರೊನಾಗೆ ಡಿಸಿಎಂ ಲಕ್ಷ್ಮಣ ಸವದಿಯವರ ಅಣ್ಣನ ಮಗ ಬಲಿ…

149
firstsuddi

ಬೆಳಗಾವಿ(ಚಿಕ್ಕೋಡಿ) : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಅನೇಕ ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇದೀಗ ಡಿಸಿಎಂ ಲಕ್ಷ್ಮಣ್ ಸವದಿ ಅವರ ಅಣ್ಣನ ಮಗ ಕೂಡ ಕೊರೊನಾಗೆ ಬಲಿಯಾಗಿದ್ದಾರೆ.

ಲಕ್ಷ್ಮಣ ಸವದಿಯವರ ಅಣ್ಣ ಪರಪ್ಪ ಸವದಿಯವರ ಮಗ ವಿನೋದ್ ಸವದಿ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಕಳೆದ ಒಂದು ವಾರದಿಂದ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.