ಕೊರೊನಾ ಅಟ್ಟಹಾಸ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,293 ಮಂದಿಗೆ ಸೋಂಕು-71 ಮಂದಿ ಬಲಿ…

216
firstsuddi

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,293 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, 71 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 37,336ಕ್ಕೆ ಏರಿಕೆಯಾಗಿದ್ದು, ಈವರೆಗೆ 1,218 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ನೀಡಿದ ಮಾಹಿತಿ ಪ್ರಕಾರ 37,336 ಮಂದಿ ಸೋಂಕಿತರ ಪೈಕಿ ಈವರೆಗೆ 9,950 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 26,167 ಮಂದಿಗೆ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.