ಕೊರೊನಾ ಅಟ್ಟಹಾಸ-ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1993 ಹೊಸ ಕೊರೊನಾ ಪಾಸಿಟಿವ್ ಪ್ರಕರಣ-73 ಮಂದಿ ಸಾವು…

202
firstsuddi

ನವದೆಹಲಿ : 2ನೇ ಹಂತದ ಲಾಕ್‍ಡೌನ್ ಹಂತ್ಯಗಳ್ಳಲು ಇನ್ನೂ 3 ದಿನ ಬಾಕಿಯಿದ್ದು, ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,993 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 73 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 35,043ಕ್ಕೆ ಏರಿಕೆಯಾಗಿದ್ದು, 1,147 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೇ ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರ ರಾಜ್ಯ ಒಂದರಲ್ಲೇ 10,478 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 35,043 ಮಂದಿ ಸೋಂಕಿತರ ಪೈಕಿ ಈವರೆಗೆ 8,888 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 25,007 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.