ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಹಿನ್ನಲೆ ಮುಂದಿನ ತಿಂಗಳು ನಡೆಯಬೇಕಿದ್ದ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಶಿಕ್ಕಕರ ಯೋಗಕ್ಷೇಮ ಹಾಗೂ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಾಗಾಗಿ 10ನೇ ತರಗತಿ ಪರಿಕ್ಷೆ ರದ್ದುಗೊಳಿಸಲಾಗಿದ್ದು, 12 ನೇ ತರಗತಿಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಐಸಿಎಸ್ಇ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಹತ್ತನೇ ತರಗತಿಯ ಪರೀಕ್ಷೆ ರದ್ದು ಮಾಡಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ.










