ಕೊರೊನಾ ಚಿಕಿತ್ಸೆಗೆ ದುಬಾರಿ ಶುಲ್ಕ ; ಐದು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್…

107
firstsuddi

ಬೆಂಗಳೂರು : ಕೊರೊನಾ ಎರಡನೇ ಅಲೆಯಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದಾರೆ. ಸರಿಯಾದ ಬೆಡ್, ಆಕ್ಸಿಜನ್ ಸಿಗದೇ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಇದರ ಮಧ್ಯೆಯೂ ಕೆಲ ಆಸ್ಪತ್ರೆಗಳು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಕೊರೊನಾ ಚಿಕಿತ್ಸೆಗೆ ಇಂತಿಷ್ಟು ದರ ಅಂತ ನಿಗದಿ ಮಾಡಿದೆ. ಆದರೆ ಕೆಲ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚು ದರ ಪಡೆದಿವೆ. ದುಬಾರಿ ಹಣ ಪಡೆದ ಆರೋಪ ಬಂದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ನೊಟೀಸ್ ಜಾರಿ ಮಾಡಿದೆ.

ನಗರದ ಖಾಸಗಿ ಆಸ್ಪತ್ರೆಗಳಾದ ಅಶ್ವಿನಿ ಆಸ್ಪತ್ರೆ, ಆಥ್ರೇಯ ಆಸ್ಪತ್ರೆ, ಸೆಂಟ್ ಜಾನ್ಸ್ ಆಸ್ಪತ್ರೆ, ಕೆ.ಕೆ ಆಸ್ಪತ್ರೆ, ಸ್ಪರ್ಶ್ ಆಸ್ಪತ್ರೆಗಳಿಗೆ ಸರ್ಕಾರ ನೊಟೀಸ್ ಜಾರಿ ಮಾಡಿದ್ದು, 3 ದಿನಗಳ ಒಳಗೆ ನೋಟಿಸ್ ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಉತ್ತರ ನೀಡದೇ ಹೋದ್ರೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ಕೊಟ್ಟಿದೆ.