ಕೊರೊನಾ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ – ಇಬ್ಬರ ಕೋವಿಡ್ ರಿಪೋರ್ಟ್ ನೆಗೆಟಿವ್!

104
firstsuddi

ಮಂಗಳೂರು : ಕೊರೊನಾ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಿದೆ. ಕೋವಿಡ್ ನಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗಲಿಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಮಾರ್ಟಮ್ ಗೂ ಮುನ್ನ ನಡೆಸಿದ ಮೃತದೇಹದ ಕೋವಿಡ್ ಟೆಸ್ಟ್ ನಲ್ಲಿ ರಿಪೋರ್ಟ್ ನೆಗೆಟಿವ್ ಬಂದಿದೆ. ರಿಪೋರ್ಟ್ ನೆಗೆಟಿವ್ ಬೆನ್ನಲ್ಲೇ ಮೃತದೇಹದ ಪೋಸ್ಟ್ ಮಾರ್ಟಮ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೋವಿಡ್ ಬಂದಿದೆ ಎಂಬ ಅತಂಕದಲ್ಲಿ ಆರ್ಯ ಸುವರ್ಣ ಮತ್ತು ಗುಣ ಸುವರ್ಣ ದಂಪತಿ ಮಂಗಳೂರು ಹೊರವಲಯದ ಕುಳಾಯಿಯ ರೆಹೆಜಾ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದರು. ಆರ್ಯ ಸುವರ್ಣ ಪತ್ನಿ ಗುಣ ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.