ನವದೆಹಲಿ : ಮಾರಣಾಂತಿಕ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಭಾನುವಾರವಷ್ಟೇ ಕೇಂದ್ರ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶಾಧ್ಯಂತ ಜನತಾ ಕಫ್ರ್ಯೂ ಹೇರಿತ್ತು. ಇದೀಗಾ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಆದೇಶವನ್ನು ಹೊರಡಿಸಿದ್ದು, 30 ರಾಜ್ಯಗಳು, 541 ಜಿಲ್ಲೆಗಳನ್ನು ಒಳಗೊಂಡಂತೆ ಕೇಂದ್ರಾಡಳಿತ ಪ್ರದೇಶಗಳನ್ನು ಸಂಪೂರ್ಣ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದೆ. ಈಗಾಗಲೇ ದೇಶಾದ್ಯಂತ 471 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಕರ್ನಾಟಕದಲ್ಲಿ 33 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.










