ವಿಜಯಪುರ : ದೇಶಾಧ್ಯಂತ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ 3 ತಿಂಗಳ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಇಡೀ ದೇಶಾಧ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ವೈರಸ್ ತಡೆಗಟ್ಟಲು 21 ದಿನಗಳ ಕಾಲ ಭಾರತ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ ಸಾವಿರಾರು ಕೋಟಿ ನಷ್ಟವುಂಟಾಗಿದೆ. ಹೀಗಾಗಿ ಶಾಸಕ ಯತ್ನಾಳ್ ಅವರು ಪರಿಹಾರ ನಿಧಿಗೆ ತಮ್ಮ ವೇತವನ್ನು ನೀಡಲು ನಿರ್ಧರಿಸಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದಾರೆ.










