ಕೊರೊನಾ ಲಸಿಕೆ ಪಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್.

148
firstsuddi

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊರೊನಾ ಲಸಿಕೆ ಪಡೆದಿದ್ದಾರೆ.

ಇಂದು ಪುನೀತ್ ರಾಜ್ ಕುಮಾರ್ ಅವರು ಮಲ್ಲೇಶ್ವರಂನಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ವಿಚಾರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ನಾನು ಇಂದು ಕೋವಿಡ್ ವ್ಯಾಕ್ಸಿನೇಷನ್ ಪಡೆದುಕೊಂಡಿದ್ದೇನೆ. ನೀವು 45 ವರ್ಷ ಹಾಗೂ ಮೇಲ್ಪಟ್ಟವರಾದರೆ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.