ಕೊರೊನಾ ವಿರುದ್ಧದ ಹೋರಾಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಪಿಎಂ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ…

167
firstsuddi

ಬೆಳ್ತಂಗಡಿ : ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಪ್ರಧಾನ ಮಂತ್ರಿ ಕೊರೊನಾ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆಯನ್ನು ನೀಡಲಾಗಿದೆ. ಬಳಿಕ ಕೊರೊನಾ ಬಗ್ಗೆ ಜಾಗೃತಿ ಭಾಷಣ ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು, ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವಾದ್ಯಂತ ಹರಡಿ ಜನಸಾಮಾನ್ಯರಲ್ಲಿ ಭಿತಿ ಹೆಚ್ಚಿಸಿದೆ. ಹೀಗಾಗಿ ಜನಸಾಮಾನ್ಯರು ಲಾಕ್‍ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಬ್ಬರು ಸಾಮಾಜಿ ಅಂತರವನ್ನು ಕಾಯ್ದುಕೊಳ್ಳಬೇಕು. ಎಲ್ಲಾ ಸ್ವಸಹಾಯ ಸಂಘಗಳ ಸದಸ್ಯರು ಶಿಸ್ತನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಮನೆಯಲ್ಲಿ ಇರುವ ಹಿರಿಯರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಲಾಕ್‍ಡೌನ್ ಅಂತಿಮಗೊಂಡ ಬಳಿಕವೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಚ್ಚರ ವಹಿಸುವುದರ ಬಗ್ಗೆ ಸಂಘದ ಸದಸ್ಯರು ತರಬೇತಿ ನೀಡುವುದು ಅತ್ಯವಶ್ಯಕವಾಗಿದೆ ಎಂದರು.

ಬಳಿಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ಮಂಜುನಾಥ್ ಅವರು ಮಾತನಾಡಿ, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಕೋಟಿ ರೂಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ರಾಜ್ಯದಲ್ಲಿ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಸಂಕಷ್ಟದಲ್ಲಿರುವ ಕುಟುಂಬಗಳ ಸ್ಥಳೀಯ ಅಗತ್ಯ ವಸ್ತುಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಪೂರೈಸುತ್ತಿದ್ದಾರೆ ಎಂದರು.