ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಐವತ್ತು ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್.

131
firstsuddi

ಹಾವೇರಿ : ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಐವತ್ತು ಸಾವಿರ ರೂ. ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಘೋಷಣೆ ಮಾಡಿದ್ದಾರೆ.

ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಗೆ ಮೃತಪಟ್ಟವರ ಕುಟುಂಬಸ್ಥರಿಗೆ ವ್ಯಯಕ್ತಿಕವಾಗಿ ಪರಿಹಾರ ಧನ ಘೋಷಣೆ ಮಾಡಿರುವ ಬಿ.ಸಿ.ಪಾಟೀಲ್ ಅವರು ಇಂದಿನಿಂದ ಮೃತರ ಮನೆಗಳಿಗೆ ಸ್ವತಃ ತಾವೇ ತೆರಳಿ ಐವತ್ತು ಸಾವಿರ ರೂಪಾಯಿ ಪರಿಹಾರ ವಿತರಿಸಲಿದ್ದಾರೆ.

ಈಗಾಗಲೇ ಕ್ಷೇತ್ರದಲ್ಲಿ 18 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರಾಗಿ ಹೋಮ್ ಐಸೋಲೇಶನ್ ನಲ್ಲಿ ಇರುವವರು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗಿ, ಅಲ್ಲದೇ ಕುಟುಂಬ ವರ್ಗದವರಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಕೃಷಿ ಬಿ.ಸಿ.ಪಾಟೀಲ್ ಅವರು ಮನವಿ ಮಾಡಿದ್ದಾರೆ.