ಕೊರೊನಾ ಸೋಂಕು ತಡೆಗಟ್ಟಲು ಇಡೀ ರಾಜ್ಯವನ್ನೇ ಲಾಕ್‍ಡೌನ್ ಮಾಡುವಂತೆ ಹೆಚ್.ಡಿ. ದೇವೇಗೌಡ ಆಗ್ರಹ…

125
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಹೀಗಾಗಿ ಇಡೀ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತೀ ವೇಗವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜು. 14ರ ರಾತ್ರಿ 8 ಗಂಟೆಯಿಂದ ಲಾಕ್‍ಡೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಆದರೆ ಇದರೊಂದಿಗೆ ಇಡೀ ರಾಜ್ಯವನ್ನು ಲಾಕ್‍ಡೌನ್ ಮಾಡಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದರು.

ನಮಗೆ ಆರೋಗ್ಯವೇ ಭಾಗ್ಯ, ಆದ್ದರಿಂದ ದಯವಿಟ್ಟು ಮನೆಯಿಂದ ಯಾರೂ ಹೊರಗೆ ಬರಬೇಡಿ, ಬರಬೇಕಾದರೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರೂ ಸ್ಯಾನಿಟೈಸರ್‍ನಿಂದ ಸ್ವಚ್ಚಗೊಳಿಸಿ ಬಳಿ ಮುಟ್ಟಿ. ಮುಖ್ಯವಾದ ಕೆಲಸ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ ಎಂದು ರಾಜ್ಯತೆ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.