ಕೊಲಂಬಿಯಾದಲ್ಲಿ ವಿಮಾನ ಪತನ : 8 ಪ್ರಯಾಣಿಕರು ಸಾವು…

55
firstsuddi

ಮೆಡಲಿನ್ : ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್ ನ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ದುರ್ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಕೊಲಂಬಿಯಾದ ವಾಯುಯಾನ ಅಧಿಕಾರಿಗಳ ಪ್ರಕಾರ, ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ನಂತರ ವಿಮಾನವು ಪತನಗೊಂಡಿದೆ. ವಿಮಾನದಲ್ಲಿದ್ದ 6 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ಮೆಡೆಲಿನ್ ಮೇಯರ್ ಡೇನಿಯಲ್ ಕ್ವಿಂಟೆರೊ ಈ ಬಗ್ಗೆ ಮಾಹಿತಿ ನೀಡಿದ್ದು, ವಿಮಾನವು ಟೇಕಾಫ್ ಸಮಯದಲ್ಲಿ ಇಂಜಿನ್ ವೈಫಲ್ಯ ಉಂಟಾದ ಹಿನ್ನೆಲೆಯಲ್ಲಿ ದುರದೃಷ್ಟವಶಾತ್ ಪೈಲಟ್ ಗೆ ವಿಮಾನವನ್ನು ಮೇಲಕ್ಕೆ ಏರಿಸಲು ಸಾಧ್ಯವಾಗಲಿಲ್ಲ. ಇದರಿಂದ ವಿಮಾನ ನಿಲ್ದಾಣದ ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ವಿಮಾನ ಪತನವಾಯಿತು. ಈ ಅಪಘಾತದಿಂದ 7 ಮನೆಗಳು ನಾಶವಾಗಿದ್ದು, 6 ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಹೇಳಿದ್ದಾರೆ.