ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಪತ್ನಿ ವಿಧಿವಶ…

102
firstsuddi

ಚಾಮರಾಜನಗರ : ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಧರ್ಮಪತ್ನಿ ವಿಜಯಾ ಮಹೇಶ್ ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ಜೆ.ಪಿ ನಗರದ ಆರ್.ವಿ ಆಸ್ಟರ್ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದಿದ್ದಾರೆ.

ವಿಜಯಾ ಅವರು ಕಳೆದ ಒಂದೂವರೆ ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ, ಆರ್.ವಿ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮೂರು ದಿನಗಳ ಹಿಂದಷ್ಟೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಐಸಿಯು ವಾರ್ಡ್​​ ನಿಂದ ಜನರಲ್ ವಾರ್ಡ್​​ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ನಿನ್ನೆ ತಡರಾತ್ರಿ 12.30ರ ಸುಮಾರಿಗೆ ಮತ್ತೆ ಆರೋಗ್ಯದಲ್ಲಿ ಏರು-ಪೇರು ಕಾಣಿಸಿಕೊಂಡು ಇಹಲೋಕ ತ್ಯಜಿಸಿದ್ದಾರೆ.

ವಿಜಯ ಮೂಲತಃ ಕನಕಪುರದವರು. ಮೈಸೂರಿನ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇಂದು ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಸಿ ಫೌಂಡೇಶನ್​​ ನಲ್ಲಿ ವಿಜಯಾ ಅವರ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.