ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ…

96
firstsuddi

ಬೆಳಗಾವಿ : ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಕೋರ್ಟ್ ಆವರಣದಲ್ಲಿ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ ಪತ್ನಿ ಜಯಮಾಲಾ ಕೈ, ಕಾಲು, ತಲೆ ಭಾಗಕ್ಕೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ.

11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಪ್ಪ ಮದುವೆಯಾಗಿದ್ದ. ಆ ಬಳಿಕ, ಕೌಟುಂಬಿಕವಾಗಿ ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಕಲಹ ಇತ್ತು. ಇಂದು ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದುದ್ದರಿಂದ ವಿಚಾರಣೆಗೆ ಬಂದ ಪತ್ನಿಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಪತ್ನಿ ಜಯಮಾಲಾ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.