ಕೋವಿಡ್ ಗೆ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಬಲಿ…

122
firstsuddi

ಬೆಳಗಾವಿ : ಕೋವಿಡ್ ಗೆ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್(78) ಅವರು ಬಲಿಯಾಗಿದ್ದಾರೆ.

ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅಲ್ಲದೇ 1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಗೆಲುವು ಸಾಧಿಸಿದ್ದರು. ನಂತರ ರಾಜಕೀಯದಲ್ಲಿ ಏಳು, ಬೀಳು ಅನುಭವಿಸುತ್ತಿದ್ದ ಬಾಬಾಗೌಡ ಅವರು ರಾಜ್ಯದಲ್ಲಿ ರೈತ ಹೋರಾಟಗಳಲ್ಲಿ ಮೂಂಚೂಣಿಯಲ್ಲಿದ್ದರು. ದೇಶದಲ್ಲಿ ಗ್ರಾಮ ಸಡಕ್ ಯೋಜನೆ ಜಾರಿಗೊಳಿಸಿದ್ದ ಕೀರ್ತಿ ಬಾಬಾಗೌಡರದ್ದಾಗಿದೆ.