ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ : ಸಿಎಂ ಬೊಮ್ಮಾಯಿ.

71
firstsuddi

ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ಹಲವಾರು ಬದಲಾವಣೆ ಮಾಡುವ ಚಿಂತನೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ 75 ನೇ ವರ್ಷದ ಸ್ವಾತಂತ್ರ್ಯ ದಿನ ಆಚರಣೆ ಸೌಭಾಗ್ಯ ಬಂದಿದೆ. ಹಲವು ಸವಾಲುಗಳನ್ನು ರಾಜ್ಯ ಎದುರಿಸಿದೆ. ಹಲವು ಸವಾಲೆದುರಿಸಿ ಇಡೀ ದೇಶಕ್ಕೆ ನಮ್ಮ ರಾಜ್ಯ ಮಾದರಿಯಾಗಿದೆ. ಇವತ್ತು ಕೋವಿಡ್ ಪರಿಸ್ಥಿತಿ ಇದೆ. ಕೋವಿಡ್ ನಿರ್ವಹಣೆಯ ಅನುಭವದ ಹಿನ್ನೆಲೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಜನರಿಗೆ ತೊಂದರೆ ಕೊಡೋದು ನಮ್ಮ ಉದ್ದೇಶ ಅಲ್ಲ, ಆದರೆ ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು. ನಾಳೆ ಕೋವಿಡ್ ನಿಯಮಗಳನ್ವಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತದೆ. ಇಂದು ಸಂಜೆ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಿಗದಿ ಮಾಡಲಾಗಿದೆ. ವೈಜ್ಞಾನಿಕವಾಗಿ ಚಿಂತನೆ ಮಾಡಿ ಚರ್ಚೆ ಮಾಡುತ್ತೇವೆ. ಎಂದು ಹೇಳಿದರು.