ಕೌಟುಂಬಿಕ ಕಲಹ : ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ…

112
Firstsuddi

ಗದಗ : ಚಾಕುವಿನಿಂದ ವ್ಯಕ್ತಿಯ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ.

ಮಂಜುನಾಥ್ ಗದುಗಿನ(44) ಕೊಲೆಯಾದ ವ್ಯಕ್ತಿ. ಪ್ರವೀಣ್ ಗದುಗಿನ(23) ಎಂಬ ಯುವಕ ತನ್ನ ಚಿಕ್ಕಪ್ಪನನ್ನೇ ಕೊಲೆ ಮಾಡಿದ್ದಾನೆ.

ಕೊಲೆಗೆ ನಿಜವಾದ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಎನ್ನಲಾಗಿದೆ. ಬೆಟಗೇರಿ ನಾಡ ಕಾರ್ಯಾಲಯ ಬಳಿ ಈ ಭೀಕರ ಹತ್ಯೆ ನಡೆದಿದ್ದು, ಘಟನೆ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಾಪತ್ತೆಯಾದ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆ ಸಂಬಂಧ ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.