ಕೌಟುಂಬಿಕ ಕಲಹ – ಪತ್ನಿಯನ್ನೇ ಹತ್ಯೆಗೈದ ಪತಿ!

105
firstsuddi

ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿ ನಡೆದಿದೆ.

ನಗರದ ಬಡಾಮಖಾನ್ ಬಡಾವಣೆಯ ನಿವಾಸಿ ಅಮೀನಾ(30) ಮೃತ ದುರ್ದೈವಿ. ಇಂದು ಬೆಳಗ್ಗೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹೊರವಲಯದಲ್ಲಿರುವ ದರ್ಗಾಕ್ಕೆ ಪತ್ನಿಯನ್ನು ಸ್ಕೂಟಿಯಲ್ಲಿ ಕರೆದೊಯ್ದಿದ್ದು ವಾಪಸ್ ಬರುವಾಗ ಸ್ಕೂಟಿ ಚಾಲನೆ ವೇಳೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹಲವು ದಿನಗಳಿಂದ ಇಬ್ಬರ ನಡುವೆ ದಿನನಿತ್ಯ ವಾಗ್ವಾದ ಹಾಗೂ ಗಲಭೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿ ಮಹಿಬೂಬ್ ಪಾಶಾನನ್ನು ಬಡಾವಣೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.