ಕೌಟುಂಬಿಕ ಕಲಹ: ಬಾಮೈದನಿಗೆ ಚಾಕು ಇರಿದು ಕೊಂದ ಬಾವ.

38
firstsuddi

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬಾಮೈದನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಿನ್ನೆ ಸಂಜೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ವೆಂಕಟೇಶ್ವರಪುರದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಿರಣ್ ಕುಮಾರ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿರುವುದು ಆತನ ಬಾವ ಲಕ್ಷ್ಮಣ ಎಂದು ತಿಳಿದು ಬಂದಿದೆ. ಲಕ್ಷ್ಮಣ ಮತ್ತು ಆತನ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ನಿನ್ನೆ ಬಾವ – ಬಾಮೈದುನನ ನಡುವೆ ಗಲಾಟೆ ಆಗಿದೆ. ಈ ನಡುವೆ ಯುಗಾದಿ ಹಬ್ಬದ ಪ್ರಯುಕ್ತ ವೆಂಕಟೇಶ್ವರಪುರದ ಗಲ್ಲಿಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಆರೋಪಿ, ಕಿರಣ್ ಕುಮಾರ್’ಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ.

ಇಸ್ಪೀಟ್ ಎಲೆಗಳ ಮೇಲಿದ್ದ ಹಣ ಎತ್ತಲು ಬಗ್ಗಿದಾಗ ಕಿರಣ್ ಕುಮಾರ್ ಬೆನ್ನಿಗೆ ಬಾವ ಲಕ್ಷ್ಮಣ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಗಾಯಾಳು ಕಿರಣ್ ಕುಮಾರ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಕುಮಾರ್ ಸಾವನ್ನಪ್ಪಿದ್ದಾನೆ.

ಸದ್ಯ ಪ್ರಕರಣ ದಾಖಲಿಸಿಕೊಂಡ ಕೆ.ಜಿ.ಹಳ್ಳಿ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.