ಕ್ಯಾಂಟರ್ ವಾಹನ ಪಲ್ಟಿ – ಇಬ್ಬರು ಸಾವು…

90
firstsuddi

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮನಸೂರ ಗ್ರಾಮದ ಬಳಿ ಬೈಪಾಸ್ ಹೆದ್ದಾರಿಯಲ್ಲಿ ನಡೆದಿದೆ.

ಬೆಳಗಿನ ಜಾವ ಘಟನೆ ನಡೆದಿದ್ದು, ಬೆಳಗಾವಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ. ಇಬ್ಬರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.