ಕ್ಯಾನ್ಸರ್ ರೋಗಿಗಳಿಗಾಗಿ ತಲೆ ಕೂದಲನ್ನು ದಾನ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿ…

347
firstsuddi

ತಿರುವನಂತಪುರಂ : ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಕ್ಯಾನ್ಸರ್ ರೋಗಿಗಳಿಗೆ ತಮ್ಮ ಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಪರ್ಣಾ ಲವಕುಮಾರ್ ಅವರು ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ತಮ್ಮ ಉದ್ದಗಿನ ಕೂದಲನ್ನು ದಾನ ಮಾಡಿದ್ದು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಕುರಿತು ಮಾತನಾಡಿದ ಅಪರ್ಣಾ ಲವಕುಮಾರ್ ಅವರು, ನನಗೆ ಸೌಂದರ್ಯ ಮುಖ್ಯವಲ್ಲ. ಈ ಹಿಂದೆ ಕ್ಯಾನ್ಸರ್ ರೋಗಿಗಳಿಗೆ ನನ್ನ ಅರ್ಧ ಕೂದಲನ್ನು ದಾನ ಮಾಡಿದ್ದೆ. ಆದರೆ ಈಗಾ ಪೂರ್ತಿ ಕೂದಲನ್ನು ದಾನ ಮಾಡಿದ್ದೇನೆ ಎಂದರು. ಅಪರ್ಣಾ ಅವರ ಈ ಕಾರ್ಯಕ್ಕೆ ಪೊಲೀಸ್ ಇಲಾಖೆ ಕೂಡಾ ಸಾಥ್ ನೀಡಿದ್ದು, ಇದಕ್ಕೆ ಮೇಲಾಧಿಕಾರಿಗಳು ಕೂಡಾ ಅನುಮತಿಯನ್ನು ನೀಡಿದ್ದಾರೆ.