ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾನವೀಯತೆ ಮೆರೆದ ನಟಿ ಕಾವ್ಯಾ ಶಾಸ್ತ್ರೀ.

90
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ನಟಿ ಕ್ಯಾವ್ಯಾ ಶಾಸ್ತ್ರೀ ಅವರು ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನಮಾಡಿ ಮಾನವೀಯತೆ ಮೆರೆದಿದ್ದಾರೆ.

ಕ್ಯಾನ್ಸರ್ ರೋಗಿಗಳಿಗಾಗಿ ನಾನು ಕೂದಲನ್ನು ದಾನ ಮಾಡಿದ್ದೇನೆ. ಕ್ಯಾನ್ಸರ್ ನಿಂದ ನನ್ನ ಚಿಕ್ಕಪ್ಪನನ್ನು ಕಳೆದುಕೊಂಡಿದ್ದೇನೆ. ಆ ನೋವನ್ನು ತುಂಬ ಹತ್ತಿರದಿಂದ ಕಂಡಿದ್ದರಿಂದ ಈ ನಿರ್ಧಾಕ್ಕೆ ಬಂದಿದ್ದೇನೆ. ಕೂದಲು ದಾನ ತುಂಬ ಸಣ್ಣ ಕೆಲಸವೇ ಇರಹುದು. ಆದರೆ ಈ ಒಂದೊಳ್ಳೆ ಕೆಲಸಕ್ಕೆ ನೀವು ಕೈ ಜೋಡಿಸಿ ಎಂದು ಮನವಿ ಮಾಡಿ ಇನ್ ಸ್ಟಾಗ್ರಾಮ್ ನಲ್ಲಿ ಕೂದಲು ಕಟ್ ಮಾಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿ ಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.