ಖಾಸಗಿ ಅನುದಾನ ರಹಿತ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಸಚಿವ ಸುರೇಶ್ ಕುಮಾರ್ ಸಿಎಂಗೆ ಮನವಿ…

176
firstsuddi

ಬೆಂಗಳೂರು : ಕೋವಿಡ್ ಹಿನ್ನಲೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವು ಪ್ರಧಾನವಾದ ಕ್ಷೇತ್ರವಾಗಿದ್ದು, ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೆಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸರ್ಕಾರ ವಿಧಿಸಿರುವ ಲಾಕ್ ಡೌನ್ ನಿಂದ ರಾಜ್ಯದಲ್ಲಿರುವ ಸಾವಿರಾರು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ವರ್ಷ ತರಗತಿಗಳು ನಡೆಯದ ಕಾರಣ ಪೋಷಕರು ಮಕ್ಕಳ ಬೋಧನ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ ಆಸಕ್ತಿ ತೋರಲಿಲ್ಲ. ಇದರಿಂದ ದೊಡ್ಡ ಮಟ್ಟದಲ್ಲಿ ಸಮಸ್ಯೆಯಾಗಿದೆ. ಈಗಾಗಲೇ ಹಲವು ಶಿಕ್ಷಕರು ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಬೀದಿಬದಿ ಹಣ್ಣು-ತರಕಾರಿ ಮಾರುತ್ತಿದ್ದಾರೆ. ಇದನ್ನು ನಾವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ನೋಡಿದ್ದೇವೆ. ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಖಾಸಗಿ ಅನುದಾನ ರಹಿತ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗಿ ಮನವಿ ಮಾಡಿದ್ದಾರೆ.