ಖಾಸಗಿ ಬಸ್ ಪಲ್ಟಿ – ಹತ್ತು ಪ್ರಯಾಣಿಕರಿಗೆ ಗಾಯ…

57
firstsuddi

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 10 ಜನ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿವೆ. 

ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.