ಖ್ಯಾತ ಡಿಸೈನರ್ ಮಸ್ತಾನ್ ಅವರು ಕೊರೊನಾ ಸೋಂಕಿಗೆ ಬಲಿ…

141
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಡಿಸೈನರ್ ಆಗಿದ್ದ ಮಸ್ತಾನ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿ ಹೆಸರಘಟ್ಟದ ಸಪ್ತಗಿರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಕಳೆದ ನಾಲ್ಕು ದಶಕಗಳಿಗಿಂತ ಪೋಸ್ಟರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಸ್ತಾನ್ ರವರು ಇದುವರೆಗೂ 2000 ಚಿತ್ರಗಳಿಗೆ ಡಿಸೈನರ್ ಆಗಿ ಕೆಲಸ ಮಾಡಿದ್ದರು. ಅಲ್ಲದೇ ಶುಕ್ಲಂಬರಧರಂ, ಸಿತಾರ, ಮತ್ತು ಕಲ್ಲೇಶಿ ಮಲ್ಲಿಶಿ ಸಿನಿಮಾಗಳನ್ನು ಸಹ ನಿರ್ದೇಶಿಸಿದ್ದಾರೆ. ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರು ಸ್ನೇಹಿತರು ಮಸ್ತಾನ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.