ತಮಿಳಿನ ಖ್ಯಾತ ನಟ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು.
ಹನ್ನೆರಡನೇ ತರಗತಿ ಓದುತ್ತಿದ್ದ ಮೀರಾ ಅವರು ಇಂದು ಮುಂಜಾನೆ ತಾವು ಇದ್ದ ರೂಂನಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಮೀರಾ ಅವರು ಹಲವು ಸಮಯದಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.
ಬೆಳಗ್ಗೆ ಮೀರಾ ಅವರು ಕೋಣೆಯ ಬಾಗಿಲು ತುಂಬಾ ಹೊತ್ತಾದರೂ ತೆರೆಯದೇ ಇರುವ ಕಾರಣಕ್ಕಾಗಿ, ಬಾಗಿಲು ತೆರೆದು ನೋಡಿದಾಗ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೀರಾ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಾಗಲೇ ಮೀರಾ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.










