ಖ್ಯಾತ ಪತ್ರಕರ್ತ, ಲೇಖಕ ನಿರಂಜನ್ ನಿಕ್ಕಂ ಅವರು ನಿಧನ…

132
First Suddi

ಮೈಸೂರು : ಹಿರಿಯ ಪತ್ರಕರ್ತ, ಲೇಖಕ ನಿರಂಜನ್ ನಿಕ್ಕಂ(66) ಅವರು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
“ಡೆಕ್ಕ್ಕನ್ ಹೆರಾಲ್ಡ್” ಪತ್ರಿಕೆಯ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ನಿರಂಜನ್ ಅವರು ಯುಒಎಂನಲ್ಲಿ ನಡೆದ ಶತಮಾನೋತ್ಸವದ ಸಂದರ್ಭದಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.
ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ನಿಧನಕ್ಕೆ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸಂತಾಪ ಸೂಚಿಸಿದ್ದಾರೆ. ಅವರ ಮೃತದೇಹವನ್ನು ವಿಜಯನಗರದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಸಂಜೆ ನಾಲ್ಕು ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.