ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಕೊರೊನಾ ಪಾಸಿಟಿವ್…

129
firstsuddi

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿರುತೆರೆ ರಿಯಾಲಿಟಿ ಶೋ ಹಾಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಈಗ ಆ ಎಲ್ಲಾ ಕೆಲಸಗಳಿಗೆ ಬ್ರೇಕ್ ಬಿದ್ದಿದೆ. ಕೆವು ದಿನಗಳ ಹಿಂದೆ ಅರ್ಜುನ್ ಜನ್ಯಗೆ, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ತಪಾಸಣೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಂಡು ತಕ್ಷಣ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಆಗಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಚೇತರಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದರು.