ಬೆಂಗಳೂರು : ಹಿರಿಯ ಸಾಹಿತಿ, ಲೇಖಕ ಸಂಶೋಧಕ ಡಾ. ಎಂ ಚಿದಾನಂದಾಮೂರ್ತಿ(88) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:30ರ ಸುಮಾರಿಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಚಿದಾನಂದಾಮೂರ್ತಿ ಅವರು ಇತಿಹಾಸಕಾರರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಮೃತರ ಅಂತಿಮ ದರ್ಶನಕ್ಕೆ ನಗರದ ತಮ್ಮ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಚಿದಾನಂದಾಮೂರ್ತಿ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.










